ಮಂಡ್ಯ: ಕೈ, ಕಾಲಿನ ನರ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಡಿವೈಎಸ್ಪಿ
ಯೋಗಾನಂದ್
ಮಂಡ್ಯ: ಕೈ, ಕಾಲಿನ ನರ ಕೊಯ್ದುಕೊಂಡು ಡಿವೈಎಸ್ಪಿಯೋರ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲಿನಲ್ಲಿ ರವಿವಾರ ನಡೆದಿದೆ.
ಶ್ರೀರಂಗಪಟ್ಟಣ ವೃತ್ತದ ಡಿವೈಎಸ್ಪಿ ಯೋಗಾನಂದ್ ಆತ್ಮಹತ್ಯೆಗೆ ಯತ್ನಿಸಿರುವ ಪೊಲೀಸ್ ಅಧಿಕಾರಿ.
ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಶ್ರೀರಂಗಪಟ್ಟಣ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಎಸ್ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story