ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ದಿಲ್ಲಿ ಹೈಕೋರ್ಟ್
ಬೆಂಗಳೂರು, ಅ.15: ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಅ.17 ಕ್ಕೆ ಮುಂದೂಡಿದೆ.
ಅ.17 ರ ಗುರುವಾರ ಮದ್ಯಾಹ್ನ 3:30 ಕ್ಕೆ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಸದ್ಯ ತಿಹಾರ್ ಜೈಲಿನಲ್ಲಿರುವ ಡಿಕೆಶಿಯ ನ್ಯಾಯಾಂಗ ಬಂಧನ ಅವಧಿಯನ್ನು ಅ.25ರ ತನಕ ವಿಸ್ತರಿಸಿ ಇಂದು ಮಧ್ಯಾಹ್ನ ದಿಲ್ಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶಿಸಿತ್ತು. ಈ ಮೂಲಕ ಸತತ ಮೂರನೇ ಬಾರಿ ಡಿಕೆಶಿ ನ್ಯಾಯಾಂಗ ಬಂಧನ ವಿಸ್ತರಣೆಯಾಗಿತ್ತು.
Next Story