ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಅ.19: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನಮಟ್ಟ ಸುಧಾರಣೆ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ರನ್ನು ಮುಖ್ಯಮಂತ್ರಿಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ಒಳ ಚರಂಡಿ ಸಂಸ್ಥೆಯ ಆಯುಕ್ತ ಡಾ.ವಿಶಾಲ್ರನ್ನು ಮುಖ್ಯಮಂತ್ರಿಯ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Next Story