ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು, ನ.4: ಪದವಿ ಪೂರ್ವ ಶಿಕ್ಷಣ ಇಲಾಖೆಯು 2019-20 ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿದ್ದು, 2020ರ ಮಾರ್ಚ್ 4 ರಿಂದ 23ರವರೆಗೆ ಪರೀಕ್ಷೆಗಳು ನಡೆಯಲಿವೆ.
ಎಲ್ಲ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10:15 ರಿಂದ ಮಧ್ಯಾಹ್ನ 01:30 ರವರೆಗೆ ನಡೆಯಲಿವೆ. ಯಾವುದೇ ರೀತಿಯಲ್ಲಿ ತೊಡಕು ಉಂಟಾಗದಂತೆ ಪರೀಕ್ಷೆಗಳನ್ನು ನಡೆಸಲು ಇಲಾಖೆ ನಿರ್ಧರಿಸಿದ್ದು, ಈ ಬಾರಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.
ಪರೀಕ್ಷಾ ವೇಳಾಪಟ್ಟಿ:
ಮಾ.4: ಇತಿಹಾಸ, ಭೌತಶಾಸ್ತ್ರ, ಸಾಮಾನ್ಯ ಗಣಿತ
ಮಾ.5: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್
ಮಾ.6: ಕರ್ನಾಟಕ ಮ್ಯೂಸಿಕ್, ಹಿಂದೂಸ್ತಾನಿ ಮ್ಯೂಸಿಕ್
ಮಾ.7: ಬಿಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನಶಾಸ್ತ್ರ,
ಮಾ.9: ಮಾಹಿತಿ ತಂತ್ರಜ್ಞಾನ, ರೀಟೆಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್
ಮಾ.10: ಉರ್ದು
ಮಾ.11: ಐಚ್ಚಿಕ ಕನ್ನಡ, ಅಕೌಂಟೆನ್ಸಿ, ಗಣಿತಶಾಸ್ತ್ರ
ಮಾ.12: ಭೌಗೋಳಿಕ
ಮಾ.13: ಶಿಕ್ಷಣ
ಮಾ.14 : ಮನೋವಿಜ್ಞಾನ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮಾ.16 : ಲಾಜಿಕ್, ಭೂವಿಜ್ಞಾನ, ಗೃಹ ವಿಜ್ಞಾನ
ಮಾ.17: ಅರ್ಥಶಾಸ್ತ್ರ, ಜೀವಶಾಸ್ತ್ರ
ಮಾ.18 : ಹಿಂದಿ
ಮಾ.19 : ಕನ್ನಡ
ಮಾ.20 : ಸಂಸ್ಕೃತ
ಮಾ.21: ರಾಜಕೀಯ ವಿಜ್ಞಾನ, ಅಂಕಿ ಅಂಶ
ಮಾ.23 : ಇಂಗ್ಲೀಷ್