ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ: ಇಬ್ಬರು ಸವಾರರು ಮೃತ್ಯು
ವಿಜಯಪುರ, ನ.12: ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಹೊರ ಭಾಗದಲ್ಲಿ ನಡೆದಿದೆ.
ಪೂಜಪ್ಪ ಮಿಣಜಗಿ (38) ಹಾಗೂ ಭೀಮಣ್ಣ ಹುಲಿಮನಿ (42 ) ಮೃತರು. ಓರ್ವ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಮೃತರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅಗ್ನಿ ಗ್ರಾಮದವರು ಎಂದು ತಿಳಿದುಬಂದಿದ್ದು, ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story