ಖೋಟಾನೋಟು ಜಾಲ ಭೇದಿಸಿದ ಪೊಲೀಸರು: ಲಕ್ಷಾಂತರ ರೂ. ಮೌಲ್ಯದ ನಕಲಿ ನೋಟುಗಳು ಜಪ್ತಿ
ಸಾಂದರ್ಭಿಕ ಚಿತ್ರ
ಬೆಳಗಾವಿ, ನ.14: ಖೋಟಾನೋಟು ಚಲಾವಣೆ ಆರೋಪ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ, 2.33 ಲಕ್ಷ ರೂ. ನಕಲಿ ನೋಟುಗಳನ್ನು ಜಪ್ತಿ ಮಾಡುವಲ್ಲಿ ಇಲ್ಲಿನ ಕುಡಚಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಗ್ರಾಮದ ಪರಶುರಾಮ ನಾಯ್ಕ (22), ಜಲಾಲ ದರ್ಗಾವಾಲೆ (24) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ಚಿಕ್ಕೋಡಿ ತಾಲೂಕು ವ್ಯಾಪ್ತಿಯಲ್ಲಿ ಖೋಟಾನೋಟು ಬದಲಾವಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಮುಖ ಆರೋಪಿ ಫಾರೂಖ್ ಎಂಬಾತ ತಲೆಮರೆಸಿ ಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
Next Story