'ಅಣಕು ಶವಯಾತ್ರೆ' ಮೂಲಕ ಮಡಿಕೇರಿ ನಗರಸಭೆ ವಿರುದ್ಧ ವಿನೂತನ ಪ್ರತಿಭಟನೆ | Vartha Bharati- ವಾರ್ತಾ ಭಾರತಿ

---

ಮೂಲಭೂತ ಸೌಲಭ್ಯಕ್ಕೆ ಆಗ್ರಹ

'ಅಣಕು ಶವಯಾತ್ರೆ' ಮೂಲಕ ಮಡಿಕೇರಿ ನಗರಸಭೆ ವಿರುದ್ಧ ವಿನೂತನ ಪ್ರತಿಭಟನೆ

ಮಡಿಕೇರಿ, ನ.15: ಮಡಿಕೇರಿ ನಗರಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವಲ್ಲಿ ನಗರಸಭೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಮಡಿಕೇರಿ ರಕ್ಷಣಾ ವೇದಿಕೆ ಸಂಘಟನೆ ನಗರಸಭೆಯ ಶವಯಾತ್ರೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿತು.

ಸಾರ್ವಜನಿಕರು ಹಾಗೂ ವೇದಿಕೆಯ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ನಗರಸಭೆಯ ಅಣಕು ಶವಯಾತ್ರೆ ನಡೆಸಿ ಅಸಮಾಧಾನದ ಘೋಷಣೆಗಳನ್ನು ಕೂಗಿದರು.

ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ, ಕಸ ವಿಲೇವಾರಿ, ಒಳಚರಂಡಿ ಸೇರಿದಂತೆ ಸಾಕಷ್ಟು ಸಮಸ್ಯೆಗಳಿವೆ. ಈ ಕುರಿತು ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದರು ನಗರಸಭೆಯ ಅಧಿಕಾರಿಗಳು ನಿದ್ರಾವಸ್ಥೆಯಲ್ಲಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನಗರಸಭೆಯ ಕಚೇರಿಗಳಲ್ಲಿ ಸಾರ್ವಜನಿಕರ  ಅರ್ಜಿ ವಿಲೇವಾರಿ ವಿಳಂಬವಾಗುತ್ತಿದೆ. ನೌಕರರ ಕೊರತೆಯೊಂದಿಗೆ ಶುಚಿತ್ವದ ಕೊರತೆಯೂ ಎದುರಾಗಿದೆ. ಗುಂಡಿಬಿದ್ದ ರಸ್ತೆಗಳು, ಪಾಕಿಂರ್ಗ್ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿದ್ದರೂ ಅಧಿಕಾರಿಗಳು ಮಾತ್ರ ಜಾಣ ಮೌನ ವಹಿಸಿದ್ದಾರೆ ಎಂದು ಟೀಕಿಸಿದರು.

ಸ್ಟೋನ್‍ಹಿಲ್ ಭಾಗದಲ್ಲಿ ಅವೈಜ್ಞಾನಿಕ ರೂಪದಲ್ಲಿ ಕಸ ವಿಲೇವಾರಿ ಮಾಡಲಾಗುತ್ತಿದ್ದು, ಟೈಂ ಬಾಂಬ್‍ನಂತೆ ತ್ಯಾಜ್ಯ ಜನರನ್ನು ಕಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಮಡಿಕೇರಿ ನಗರ ರಕ್ಷಣಾ ವೇದಿಕೆಯ ಅಧ್ಯಕ್ಷ ಪವನ್ ಪೆಮ್ಮಯ್ಯ, ನಗರದ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿ ಅಧಿಕಾರಿಗಳ ಕಣ್ಣು ತೆರೆಸುವ ಪ್ರಯತ್ನ ಮಾಡಲಾಗಿದೆ.  ಇನ್ನಾದರೂ ನಗರಸಭೆ ನಿದ್ದೆಯಿಂದ ಎಚ್ಚೆತ್ತು ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಬೇಕೆಂದು ಒತ್ತಾಯಿಸಿದರು. ತಪ್ಪಿದಲ್ಲಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಆರಂಭಿಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ವೇದಿಕೆಯ ಉಪಾಧ್ಯಕ್ಷ ಗಜೇಂದ್ರ, ಕಾರ್ಯದರ್ಶಿ ಅಜಿತ್, ಪ್ರಧಾನ ಕಾರ್ಯದರ್ಶಿ ಬಿ.ಎಂ.ಹರೀಶ್, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕರ್ಕೆರ, ಖಜಾಂಚಿ ಉಮೇಶ್, ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ, ಪ್ರಮುಖರಾದ ಸತ್ಯ, ದಿನೇಶ್ ನಾಯಕ್ ಮತ್ತಿತರರು ಪಾಲ್ಗೊಂಡಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top