ಶಾಸಕ ತನ್ವೀರ್ ಸೇಠ್ ಗೆ ಚೂರಿ ಇರಿತ
ಮೈಸೂರು: ಶಾಸಕ ತನ್ವೀರ್ ಸೇಠ್ ಅವರಿಗೆ ಯುವಕನೋರ್ವ ಚೂರಿಯಿಂದ ಕುತ್ತಿಗೆಯ ಭಾಗಕ್ಕೆ ಇರಿದು ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ತಡ ರಾತ್ರಿ ನಡೆದಿದೆ.
ಗಾಯಾಳು ತನ್ವೀರ್ ಸೇಠ್ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಬನ್ನಿಮಂಟಪದ ಬಾಲಭವನದ ಆವರಣದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಯುವಕ ತನ್ವೀರ್ ಸೇಠ್ ಅವರ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿಯನ್ನು ಎನ್.ಆರ್.ಠಾಣೆ ಪೊಲೀಸರ ವಶಕ್ಕೆ ಪಡೆದಿದ್ದಾರೆ.
Next Story