ಜೆಡಿಎಸ್ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ: ಜಿ.ಟಿ.ದೇವೇಗೌಡಗೆ ಕೈತಪ್ಪಿದ ಸ್ಥಾನ
ಜಿ.ಟಿ.ದೇವೇಗೌಡ
ಬೆಂಗಳೂರು, ನ.18: ಉಪಚುನಾವಣೆ ಸಂಬಂಧ ಜೆಡಿಎಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರ ಹೆಸರನ್ನು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.
ಮೊದಲನೇ ಸ್ಥಾನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎರಡನೇ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಮೂರನೇ ಸ್ಥಾನದಲ್ಲಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಅನಿತಾ ಕುಮಾರಸ್ವಾಮಿ, ನಿಖಿಲ್ಕುಮಾರಸ್ವಾಮಿ, ಸೂರಜ್ ರೇವಣ್ಣ, ಭಾವನಿ ರೇವಣ್ಣ ಸೇರಿದಂತೆ 40 ಮಂದಿ ಜೆಡಿಎಸ್ ಮುಖಂಡರ ಹೆಸರು ಪಟ್ಟಿಯಲ್ಲಿದೆ.
ಪಟ್ಟಿಯಲ್ಲಿ ಯಾರಾರು?: ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಬಂಡೆಪ್ಪಕಾಶೆಂಪೂರ್, ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಕುಪೇಂದ್ರ ರೆಡ್ಡಿ, ಕೋನರೆಡ್ಡಿ, ಕೃಷ್ಣಾರೆಡ್ಡಿ, ಅನ್ನದಾನಿ, ಬಿ.ಎಂ.ಫಾರೂಕ್, ಕಾಂತರಾಜು, ಟಿ.ಎ.ಶರವಣ ಸೇರಿದಂತೆ ಪ್ರಮುಖರಿದ್ದಾರೆ.
Next Story