ಮೈಸೂರು ಉತ್ಪನ್ನಗಳನ್ನು ಉಪಯೋಗಿಸಿ ಕನ್ನಡಪ್ರೇಮ ಮೆರೆಯೋಣ: ಯದುವೀರ್ ಚಾಮರಾಜ ಒಡೆಯರ್ | Vartha Bharati- ವಾರ್ತಾ ಭಾರತಿ

---

ಜಯಚಾಮರಾಜೇಂದ್ರ ಒಡೆಯರ್ ಶತಮಾನೋತ್ಸವ ಕಾರ್ಯಕ್ರಮ

ಮೈಸೂರು ಉತ್ಪನ್ನಗಳನ್ನು ಉಪಯೋಗಿಸಿ ಕನ್ನಡಪ್ರೇಮ ಮೆರೆಯೋಣ: ಯದುವೀರ್ ಚಾಮರಾಜ ಒಡೆಯರ್

ಬೆಂಗಳೂರು, ನ.19: ಮೈಸೂರು ಉತ್ಪನ್ನಗಳು ಸೇರಿದಂತೆ ಸ್ಥಳೀಯ ಉತ್ಪನ್ನಗಳನ್ನು ಉಪಯೋಗಿಸುವ ಮೂಲಕ ನಿಜವಾದ ಕನ್ನಡ ಪ್ರೇಮವನ್ನು ಮೆರೆಯೋಣವೆಂದು ಮೈಸೂರು ರಾಜ ವಂಶಸ್ಥ ಯದುವೀರ ಚಾಮರಾಜ ಒಡೆಯರ್ ಆಶಿಸಿದ್ದಾರೆ.

ಮಂಗಳವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಕನ್ನಡ ಕ್ರಿಯಾ ಸಮಿತಿ ಜಂಟಿಯಾಗಿ ಕೆಎಸ್ಸಾರ್ಟಿಸಿ ಘಟಕ-2ರಲ್ಲಿ ಆಯೋಜಿಸಿದ್ದ ಜಯಚಾಮರಾಜೇಂದ್ರ ಒಡೆಯರ್‌ರವರ ಜನ್ಮ ಶತಮಾನೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡದ ಜನತೆ ಬೆಳಗ್ಗೆ ಎದ್ದು ಮೈಸೂರು ಸ್ಯಾಂಡಲ್ ಸೋಪ್‌ನಿಂದ ಮುಖ ತೊಳೆಯೋಣ, ಸ್ಥಳೀಯ ರೈತರು ಬೆಳೆದ ಹತ್ತಿಯಿಂದ ಉತ್ಪಾದಿಸಿದ ಬಟ್ಟೆಗಳನ್ನು ಹಾಕೋಣವೆಂದು ಮೈಸೂರಿನ ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಯಾವಾಗಲೂ ಹೇಳುತ್ತಿದ್ದರು. ಹೀಗೆ ನಮ್ಮ ಮೊದಲ ಆದ್ಯತೆ ಸ್ಥಳೀಯ ವಸ್ತುಗಳಿಗೆ ಇರಬೇಕು. ಕನ್ನಡದ ರೈತರು, ಉತ್ಪಾದಕರು ಚೆನ್ನಾಗಿದ್ದರೆ ಮಾತ್ರ ಕನ್ನಡ ನಾಡು, ನುಡಿ ಬೆಳೆಯಲು ಸಾಧ್ಯವೆಂದು ಅವರು ಹೇಳಿದರು.

ಇತ್ತೀಚಿನ ಕೆಲ ವರ್ಷಗಳಿಂದ ಬಿಟಿ ಹತ್ತಿ ಬೆಳೆದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಬಿಟಿ ಹತ್ತಿ ಬೀಜಗಳು ನಮ್ಮ ಮಣ್ಣನ್ನು ಮಾಲಿನ್ಯ ಮಾಡುತ್ತಿದೆ. ಪರಿಸರಕ್ಕೆ ಹಾನಿಕಾರಕವಾಗಿದೆ. ಇಂತವುಗಳನ್ನು ತಿರಸ್ಕರಿಸಿ ಸ್ಥಳೀಯ ಹತ್ತಿಗಳನ್ನು ಬೆಳೆಯುವುದಕ್ಕೆ ಪ್ರೋತ್ಸಾಹಿಸಬೇಕಾಗಿದೆ. ಕೆಎಸ್ಸಾರ್ಟಿಸಿ ಸಂಸ್ಥೆಯು ಸ್ಥಳೀಯ ಉತ್ಪನ್ನಗಳನ್ನು ಬಳಸಿಕೊಳ್ಳುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಿ ಎಂದು ಅವರು ಹೇಳಿದರು.

ಇಡೀ ದೇಶದಲ್ಲಿ ಕರ್ನಾಟಕ ಹೆಚ್ಚಿನ ಅರಣ್ಯ ಸಂಪತ್ತಿನಿಂದ ಕೂಡಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ನಾನಾ ಕಾರಣಗಳಿಗಾಗಿ ಕಾಡು ಕಡಿಮೆಯಾಗುತ್ತಿದೆ ಎಂಬ ಆತಂಕ ಎಲ್ಲರಲ್ಲಿದೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಅರಣ್ಯ ಸಂಪತ್ತನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಾವೆಲ್ಲರೂ ಮುಂದಾಗಬೇಕೆಂದು ಅವರು ಆಶಿಸಿದರು.

ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮಾತನಾಡಿ, ನಮ್ಮ ಸಾರಿಗೆ ಸಂಸ್ಥೆಯು ಒಳಗೊಂಡಂತೆ ನಾಡು, ನುಡಿ, ಸಾಹಿತ್ಯ ಸಂಸ್ಕೃತಿಗೆ ಮೈಸೂರು ಮಹಾರಾಜರ ಕೊಡುಗೆ ಅನನ್ಯವಾದುದ್ದಾಗಿದೆ. ಅವರನ್ನು ನೆನೆಯುವುದು ಕನ್ನಡಿಗರಾದ ನಮ್ಮ ಕರ್ತವ್ಯವೆಂದು ತಿಳಿಸಿದರು.

ಈಗ ಮೈಸೂರಿನ ರಾಜ ಮನೆತನವನ್ನು ಮುನ್ನಡೆಸುತ್ತಿರುವ ಯದುವೀರ ಚಾಮರಾಜ ಒಡೆಯರ್ ಗ್ರಾಮೀಣ ಭಾಗದ ಶಿಕ್ಷಣ ಅಭಿವೃದ್ಧಿಗೆ ಕನಸು ಕಂಡಿದ್ದಾರೆ. ಹಾಗೆಯೇ ಪರಿಸರದ ಸಂರಕ್ಷಣೆಯಲ್ಲಿಯೂ ಸಕ್ರಿಯರಾಗಿದ್ದಾರೆ. ಅವರ ಕನಸಿನ ಕರ್ನಾಟಕ ರಾಜ್ಯ ನಮ್ಮೆಲ್ಲರದೂ ಆಗಿದೆ ಎಂದು ಅವರು ಅಭಿಮಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕೆಎಸ್ಸಾರ್ಟಿಸಿ ನಿಗಮದ ನಿರ್ದೇಶಕಿ ಕವಿತಾ ಸಿ.ಮನ್ನಿಕೇರಿ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ, ವೈಜ್ಞಾನಿಕ ಚಿಂತಕ ಡಾ.ಹುಲಿಕಲ್ ನಟರಾಜ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ.ಬಿ.ಕೆ.ರವಿ ಮತ್ತಿತರರಿದ್ದರು.

'ಕರಿಮಣ್ಣೆಂಬ ಹೆಮ್ಮೆಯಿದೆ'
ಕರಿಮಣ್ಣಿನಿಂದ ಆವೃತಗೊಂಡಿರುವ ರಾಜ್ಯಕ್ಕೆ ದೇವರಾಜ ಅರಸು 1973ರಲ್ಲಿ ಕರ್ನಾಟಕವೆಂದು ನಾಮಕರಣ ಮಾಡಿದ್ದು ಸೊಗಸಾಗಿದೆ. ಕರಿ ಮಣ್ಣಿನಲ್ಲಿ ನೆಲೆಸಿರುವ ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಆ ಮೂಲಕ ಕನ್ನಡ ಮಾತನಾಡುವವರೆಲ್ಲರೂ ಐಕ್ಯರಾಗಬೇಕೆಂದು ಶ್ರಮಿಸಿದ್ದ ನಮ್ಮ ಹಿರಿಯರ ಕನಸನ್ನು ನನಸು ಮಾಡಲಾಗಿದೆ.
-ಯದುವೀರ ಒಡೆಯರ್, ರಾಜ ವಂಶಸ್ಥ

ಜಯಚಾಮರಾಜೇಂದ್ರ ಒಡೆಯರ್‌ರವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಕೆಎಸ್ಸಾರ್ಟಿಸಿ ಸಂಸ್ಥೆಯಿಂದ ಅವರ ಹೆಸರಿನಲ್ಲಿ ಒಂದು ಕೋಟಿ ರೂ. ಮೌಲ್ಯದಲ್ಲಿ ದತ್ತಿ ಪ್ರಶಸ್ತಿಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಆ ಪ್ರಶಸ್ತಿಯನ್ನು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ. ನಾಡು, ನುಡಿಗಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಲಾಗುವುದು.
-ಶಿವಯೋಗಿ ಕಳಸದ, ವ್ಯವಸ್ಥಾಪ ನಿರ್ದೇಶಕ, ಕೆಎಸ್ಸಾರ್ಟಿಸಿ

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top