ಯಾರಿಗೆ ಯಾವ ಖಾತೆ ಎನ್ನುವುದು ಸಿಎಂ ತೀರ್ಮಾನ: ಬಸವರಾಜ ಬೊಮ್ಮಾಯಿ
ಹಾವೇರಿ, ಡಿ.10: ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅವರು ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಸಿ ಪಾಟೀಲರಿಗೆ ಯಾವ ಸ್ಥಾನ ಕೊಡಬೇಕು ಎಂಬುದನ್ನು ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ. ಸರಕಾರದಲ್ಲಿ ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಯಡಿಯೂರಪ್ಪ ಅವರ ತೀರ್ಮಾನವಾಗಿದೆ. ಹಾವೇರಿ ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
Next Story