ಹನೂರು: ಲೋಕ್ಕನಹಳ್ಳಿ ಶಾಲೆ ವಿದ್ಯಾರ್ಥಿ ವಿವಿಧ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹನೂರು, ಡಿ.22: ತಾಲೂಕಿನ ಲೋಕ್ಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮಣಿಕಂಠ ಎಂಬಾತ ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ 2019-20 ಸಾಲಿನ ವಿಕಲಚೇತನರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಉದ್ದ ಜಿಗಿತ, ಗುಂಡೆಸೆತ ಮತ್ತು 50 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ, ಜೊತೆಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಹನೂರು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್ ಸ್ವಾಮಿ ಸೇರಿದಂತೆ ಲೊಕ್ಕನಹಳ್ಳಿ ಪ್ರೌಡಶಾಲೆ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಕರಾದ ಲಕ್ಷ್ಮಣ್, ಶಾಲೆಯ ಎಲ್ಲಾ ಶಿಕ್ಷಕ ವೃಂದ ಮತ್ತು ಪೋಷಕರು ಅಭಿನಂಧಿಸಿದ್ದಾರೆ.
Next Story