ಲಾರಿಗೆ ಕಾರು ಢಿಕ್ಕಿ: ವಕೀಲ ಮೃತ್ಯು
ಶಿವಮೊಗ್ಗ, ಜ. 4: ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ವಕೀಲರೋರ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹೊರವಲಯ ನಿಧಿಗೆ ಗ್ರಾಮದ ಬಿ.ಹೆಚ್.ರಸ್ತೆಯಲ್ಲಿ ನಡೆದಿದೆ.
ಭದ್ರಾವತಿ ಪಟ್ಟಣದ ನಿವಾಸಿ ಎಲ್.ಜಿ.ಗಂಗಾಧರ್ ಮೃತಪಟ್ಟ ವಕೀಲ ಎಂದು ಗುರುತಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಜಿಲ್ಲಾ ವಕೀಲರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಭದ್ರಾವತಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story