ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ದ್ವಿತೀಯ: ವಿದ್ಯಾರ್ಥಿನಿಗೆ ಅಭಿನಂದನೆ
ಹನೂರು: ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿ ಹಿಂದಿ ಕಂಠಪಾಠ ಸ್ವರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ.
ಹನೂರು ತಾಲೂಕಿನ ರಾಮಾಪುರ ಇಂದಿರಾಗಾಂಧಿ ವಸತಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿ ಭೂಮಿಕ ಡಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಹಿಂದಿ ಕಂಠಪಾಠ ಸ್ವರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ವಿದ್ಯಾರ್ಥಿನಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕ ಲಾಲು ನಾಯಕ ಹಾಗು ಶಿಕ್ಷಕ ವೃಂದ ವಿದ್ಯಾರ್ಥಿಯನ್ನು ಅಭಿನಂದಿನಿಸಿದ್ದಾರೆ.
Next Story