ಮಂಗಳೂರಿನಲ್ಲಿ ಸ್ಫೋಟಕ ಪತ್ತೆ ಪ್ರಕರಣದ ಬಗ್ಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ
ಬೆಂಗಳೂರು, ಜ. 21: ‘ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಘಟನೆ ದುರದೃಷ್ಟಕರ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಮಂಗಳವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಈ ಘಟನೆಗೆ ಕಾರಣರಾಗಿರುವ ಶಕ್ತಿಗಳನ್ನು ಮಟ್ಟ ಹಾಕಲಾಗುವುದು. ಭದ್ರತೆಗೆ ಭಂಗ ತರುವ ಯಾವುದೇ ರೀತಿಯ ಚಟುವಟಿಕೆಗಳನ್ನು ಸಹಿಸುವುದಿಲ್ಲ. ನಾಗರಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ’ ಎಂದು ಅಭಯ ನೀಡಿದ್ದಾರೆ.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಘಟನೆ ದುರದೃಷ್ಟಕರ.
— B.S. Yediyurappa (@BSYBJP) January 21, 2020
ಈ ಘಟನೆಗೆ ಕಾರಣರಾಗಿರುವ ಶಕ್ತಿಗಳನ್ನು ಮಟ್ಟ ಹಾಕಲಾಗುವುದು. ಭದ್ರತೆಗೆ ಭಂಗ ತರುವ ಯಾವುದೇ ರೀತಿಯ ಚಟುವಟಿಕೆಗಳನ್ನು ಸಹಿಸುವುದಿಲ್ಲ. ನಾಗರಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ.
Next Story