ಅಂಗನವಾಡಿ ಕಾರ್ಯಕತೆರ್ಯರಿಗೆ ಸ್ಮಾರ್ಟ್ ಫೋನ್: ಸಚಿವೆ ಶಶಿಕಲಾ ಜೊಲ್ಲೆ
ಬೆಳಗಾವಿ, ಜ.28: ಅಂಗನವಾಡಿಯಲ್ಲಿನ ಮಕ್ಕಳ ಸಂಖ್ಯೆ ಮತ್ತು ತಿಂಗಳ ಬೆಳವಣಿಗೆ ಸೇರಿ ಅನೇಕ ಮಾಹಿತಿ ಪಡೆಯುವ ಸಲುವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮ್ಕಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಗರದ ಗಾಂಧಿ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ತ್ರೀಶಕ್ತಿ ಸಮಾವೇಶ ಹಾಗೂ ರಾಷ್ಟ್ರೀಯ ಹೆಣ್ಣು ಮ್ಕಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪುರುಷರ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ಅದೇ ಮಾದರಿಯಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಲ್ಲಿ ಪುರುಷರು ಬೆನ್ನೆಲುಬಾಗಿ ನಿಲ್ಲಬೇಕಿದೆ. ಭೂಮಿ, ಪ್ರಕೃತಿ, ನದಿಗಳನ್ನು ಮಹಿಳೆಗೆ ಹೋಲಿಸುತ್ತಾರೆ. ಅಂತಹ ಸಹನಶೀಲತೆ ಮಹಿಳೆಯರಿಗಿದೆ. ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮಾನರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಗಂಡು ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ವೌಲ್ಯಗಳನ್ನು ತಿಳಿಸಿಕೊಡಬೇಕಾದ ಅಗತ್ಯವಿದೆ. ಉತ್ತಮ ವಾತಾವರಣದಲ್ಲಿ ಬೆಳೆಸಬೇಕಾದ ಹೊಣೆಗಾರಿಕೆ ಪೋಷಕರದಾಗಿದೆ ಎಂದರು.
ಮೂರು ವರ್ಷಗಳಲ್ಲಿ ರಾಜ್ಯದಲ್ಲಿರುವ ಮಹಿಳಾ ಸಂಘಗಳಿಗೆ ಸಹಾಯಧನ ನೀಡುವ ಆಲೋಚನೆ ಮಾಡುತ್ತಿದ್ದೇವೆ. ಸಂಘದಲ್ಲಿ ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡುವ ನಿಟ್ಟಿನಲ್ಲಿ ಇಲಾಖೆಯಿಂದಲೇ ಕ್ರಮ ಕೈಗೊಳ್ಳಲಾಗುವುದು. ಸಂಘಗಳಿಗೆ ಹೊಸ ಯೋಜನೆಗಳನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
-ಶಶಿಕಲಾ ಜೊಲ್ಲೆ, ಸಚಿವೆ, ಮಹಿಳಾ ಮತ್ತು ಮ್ಕಕಳ ಅಭಿವೃದ್ಧಿ ಇಲಾಖೆ