ಸಂಶೋಧನಾ ವಿದ್ಯಾರ್ಥಿಗಳಿಗೆ 25 ಸಾವಿರ ರೂ. ವಿದ್ಯಾರ್ಥಿ ವೇತನಕ್ಕೆ ಸಿಎಂಗೆ ಮನವಿ
ಬೆಂಗಳೂರು, ಫೆ.13: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ಪೂರ್ಣಾವಧಿ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ 25 ಸಾವಿರ ವಿದ್ಯಾರ್ಥಿ ವೇತನ ನೀಡಬೇಕು ಎಂದು ವಿದ್ಯಾರ್ಥಿ ಬಂಧುತ್ವ ವೇದಿಕೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯು ಸಂಶೋಧನಾ ವಿದ್ಯಾರ್ಥಿಗಳಿಗೆ 25 ಸಾವಿರ ವಿದ್ಯಾರ್ಥಿ ವೇತನ ಹಾಗೂ ಪ್ರತಿ ವರ್ಷ 10 ಸಾವಿರ ನಿರ್ವಹಣಾ ವೆಚ್ಚ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೂ ನೀಡಬೇಕು ಎಂದು ಮನವಿಯಲ್ಲಿ ಹೇಳಲಾಗಿದೆ.
Next Story