ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆಯ ನೇಮಕಾತಿ
ಬೆಂಗಳೂರು, ಫೆ.16: ಸರಕಾರದ ಆದೇಶದಂತೆ ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರಕಾರಿ ಅಭಿಯೋಜಕರು ಹಾಗೂ ಸಹಾಯಕ ಸರಕಾರಿ ವಕೀಲರ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಎರಡು ಅವಧಿಗಳಲ್ಲಿ ಪ್ರಾಥಮಿಕ ಪರೀಕ್ಷೆಯನ್ನು ಪ್ರಾಧಿಕಾರದಿಂದ ಮಾ.28ರಂದು ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು.
ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪ್ರಾಧಿಕಾರದ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಪ್ರಾಥಮಿಕ ಪರೀಕ್ಷೆಗೆ ಹಾಜರಾಗಬೇಕು. ಹೆಚ್ಚಿನ ವಿವರಗಳಿಗಾಗಿ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಅಥವಾ ಇಲಾಖಾ ವೆಬ್ಸೈಟ್ http://www.karnataka.gov.in/prosecution/pages/homes.aspx ಅನ್ನು ನೋಡಬಹುದಾಗಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
Next Story