ಫೆ.23ರಂದು ವಿಜ್ಞಾನ ಪರಿಷತ್ ಕಾರ್ಯಕಾರಿ ಸಮಿತಿಗೆ ಚುನಾವಣೆ
ಬೆಂಗಳೂರು, ಫೆ.21: ಮುಂದಿನ ಮೂರು ವರ್ಷಗಳ ಅವಧಿಯ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಕಾರ್ಯಕಾರಿ ಸಮಿತಿಗೆ ಫೆ.23ರ ರವಿವಾರದಂದು ರಾಜ್ಯಾದ್ಯಂತ ಚುನಾವಣೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.23ರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಎಲ್ಲ ಸದಸ್ಯರು ಮತದಾನ ಮಾಡಲು ಮತಗಟ್ಟೆಯಲ್ಲಿ ತಮ್ಮ ಭಾವಚಿತ್ರ ಹೊಂದಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನಿಂದ ವಿತರಿಸಿರುವ ಗುರುತಿನ ಕಾರ್ಡ್, ಆಧಾರ್ ಕಾರ್ಡ್, ಪಾಸ್ಪೋರ್ಟ್ ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ಗಳನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.
ಸದಸ್ಯರು ತಮ್ಮ ವ್ಯಾಪ್ತಿಯ ಮತಗಟ್ಟೆ, ಮತದಾರರ ಪಟ್ಟಿ ಇತ್ಯಾದಿ ವಿವರಗಳನ್ನು ವಿಜ್ಞಾನ ಪರಿಷತ್ನ ವೆಬ್ಸೈಟ್ www.krvp.org ನಿಂದ ತಿಳಿದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.080-26718939, 94835-49159 ಮೂಲಕ ಕೂಡ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.