ಲಾಕ್ ಡೌನ್ ಆದೇಶ ಉಲ್ಲಂಘನೆ: ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ
ಶಿವಮೊಗ್ಗ: ಲಾಕ್ ಡೌನ್ ಆದೇಶ ಉಲ್ಲಂಘಿಸಿ ಅನಾವಶ್ಯಕವಾಗಿ ದ್ವಿಚಕ್ರ ವಾಹನಗಳಲ್ಲಿ ಸಂಚಸುತ್ತಿದ್ದವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅವರ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಯಾವುದೇ ಸಕಾರಣಗಳಿಲ್ಲದೆ ಮೊಟಾರ್ ಸೈಕಲ್ಗಳಲ್ಲಿ ಸುತ್ತಾಡುತ್ತಿದ್ದ ಯುವಕರನ್ನು ಪೊಲೀಸ್ ಠಾಣೆಗೆ ಕರೆತಂದು ಅವರುಗಳ ವಿರುದ್ದ ಲಘು ಪ್ರಕರಣ ದಾಖಲಿಸಲಾಗಿದ್ದು, ಜಿಲ್ಲೆಯಾದ್ಯಂತ ಒಟ್ಟು 58 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
Next Story