ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯನಾಗಿ ಸೇವೆ ಸಲ್ಲಿಸಲು ಸಿದ್ಧ: ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ
ಕೊರೋನ ವೈರಸ್ ಹಿನ್ನೆಲೆ
ಮೈಸೂರು, ಎ.2: ಕೊರೋನ ವೈರಸ್ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ.
ಈ ಬಗ್ಗೆ ವಿಡಿಯೋದೊಂದಿಗೆ ಟ್ವೀಟ್ ಮಾಡಿರುವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಕೊರೋನ ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ವೈದ್ಯರ ಅಗತ್ಯವಿದ್ದರೆ ನಾನು ಕೂಡ ಒಬ್ಬ ವೈದ್ಯನಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.
ಕೊರೊನಾ ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ವೈದ್ಯರ ಅಗತ್ಯವಿದ್ದರೆ ನಾನು ಕೂಡ ಒಬ್ಬ ವೈದ್ಯನಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ದನಿದ್ದೇನೆ.@siddaramaiah @INCKarnataka @BSYBJP @DHFWKA @Vijaykarnataka @prajavani pic.twitter.com/EIqDcne28A
— Dr Yathindra Siddaramaiah (@Dr_Yathindra_S) April 2, 2020
Next Story