ಬೆಳಗಾವಿಯಲ್ಲಿ ಮತ್ತೆ 6 ಪ್ರಕರಣಗಳ ವರದಿ ನೆಗೆಟಿವ್: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ
ಬೆಳಗಾವಿ, ಎ.3: ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ ಒಟ್ಟು ಆರು ಮಾದರಿಗಳ ಪೈಕಿ ಎಲ್ಲ ಆರು ವರದಿಗಳು ನೆಗೆಟಿವ್ ಬಂದಿವೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಿಂದ ಇದುವರೆಗೆ ಒಟ್ಟು 27 ಮಾದರಿಗಳನ್ನು ಕಳುಹಿಸಲಾಗಿತ್ತು. ಇಂದು ಬಂದಿರುವ ವರದಿಯ ಪ್ರಕಾರ ಎಲ್ಲ 27 ಮಾದರಿಗಳು ನೆಗೆಟಿವ್ ಬಂದಿವೆ ಎಂದು ತಿಳಿಸಿದ್ದಾರೆ.
ಇದುವರೆಗೆ 21 ಮಾದರಿಗಳ ವರದಿ ನೆಗೆಟಿವ್ ಬಂದಿದ್ದು, ಇಂದಿನ ಆರು ಪ್ರಕರಣಗಳ ವರದಿ ಕೂಡ ನೆಗೆಟಿವ್ ಬಂದಿದೆ. ಜನರು ವದಂತಿಗಳಿಗೆ ಕಿವಿಗೊಡದೆ ಸರಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
Next Story