ಕೊಡಗು ಜಿಲ್ಲೆಯಲ್ಲಿ ಒಟ್ಟು 248 ಮಂದಿಗೆ ಗೃಹ ಸಂಪರ್ಕ ತಡೆ: ಜಿಲ್ಲಾಧಿಕಾರಿ
ಮಡಿಕೇರಿ, ಎ.11: ರಾಜ್ಯದ ಇತರ ಜಿಲ್ಲೆಗಳ 248 ಮಂದಿ ಸೇರಿ ಒಟ್ಟು 273 ಮಂದಿ ಕೊಡಗು ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ದಿಲ್ಲಿಯ ಧಾರ್ಮಿಕ ಸಮ್ಮೇಳನ ಸಂಬಂಧ ಜಿಲ್ಲೆಯಿಂದ ದೆಹಲಿಗೆ ತೆರಳಿ ಹಿಂತಿರುಗಿರುವ 14 ಮತ್ತು ಇತರ ರಾಜ್ಯಗಳ 11 ಮಂದಿ ಗೃಹ ಸಂಪರ್ಕ ತಡೆಯಲಿದ್ದಾರೆ. ಒಟ್ಟು 89 ಮಂದಿಯ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ. 83 ಪ್ರಕರಣಗಳ ವರದಿ ನೆಗೆಟಿವ್ ಬಂದಿದ್ದು, 6 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ ಕೋವಿಡ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್ ನಲ್ಲಿ ಯಾವುದೇ ಪ್ರಕರಣಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
Next Story