ಹುಬ್ಬಳ್ಳಿ: ಸ್ಯಾನಿಟೈಸರ್ ಸೇವಿಸಿದ ಹತ್ತು ಮಂದಿ ಆಸ್ಪತ್ರೆಗೆ ದಾಖಲು
ಹುಬ್ಬಳ್ಳಿ, ಎ.21: ಕಲಘಟಗಿ ತಾಲೂಕಿನ ಗಂಭ್ಯಾಪುರ ಗ್ರಾಮದಲ್ಲಿ ಸ್ಯಾನಿಟೈಸರ್ ಸೇವಿಸಿ ಇಬ್ಬರು ಮೃತಪಟ್ಟ ಘಟನೆ ಬೆನ್ನಲ್ಲೆ ಸ್ಯಾನಿಟೈಸರ್ ಸೇವಿಸಿದ ಅದೇ ಗ್ರಾಮದ ಹತ್ತು ಜನರನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ.
ಗ್ರಾಮದಲ್ಲಿ ಸುಮಾರು 15 ಜನ ಮದ್ಯ ವ್ಯಸನಿಗಳು ಸ್ಯಾನಿಟೈಸರ್ ಸೇವನೆ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಪೊಲೀಸರು ಸ್ಯಾನಿಟೈಸರ್ ಕುಡಿದವರನ್ನು ಪತ್ತೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಸೋಮವಾರ ಸಿಕ್ಕ ಹತ್ತು ಜನರನ್ನು ಕಿಮ್ಸ್ ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸ್ಯಾನಿಟೈಸರ್ ಕುಡಿದು ಅಸ್ವಸ್ಥಗೊಂಡಿದ್ದ ಅಕ್ಕ-ತಮ್ಮ ಚಿಕಿತ್ಸೆ ಫಲಿಸದೇ ರವಿವಾರ ಸಾವನ್ನಪ್ಪಿದ್ದರು. ಹೀಗಾಗಿ ಇವರ ಜೊತೆ ಸ್ಯಾನಿಟೈಸರ್ ಸೇವಿಸಿದ ಇನ್ನುಳಿದ ಜನರನ್ನು ಪೊಲೀಸರು ಹುಡುಕುವ ಕಾರ್ಯದಲ್ಲಿ ತೊಡಗಿದ್ದಾರೆ
Next Story