ವಿಜಯಪುರ: ಬೈಕ್ಗಳ ಮಧ್ಯೆ ಮುಖಾಮುಖಿ ಢಿಕ್ಕಿ; ಇಬ್ಬರು ಮೃತ್ಯು
ವಿಜಯಪುರ, ಮೇ 6: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಢಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ವಿಜಯಪುರ ನಗರ ಸಂಚಾರ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ನಡೆದಿದೆ.
ವಿಜಯಪುರ ನಗರ ನಿವಾಸಿಗಳಾದ ಸಿದ್ದರಾಮ ಭೈರೊಡಗಿ(30) ಹಾಗೂ ವಿಜಯಕುಮಾರ ಧುಳಂಗೆ(32) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಘಟನೆ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Next Story