ಸಹಾಯಧನ ಘೋಷಣೆ: ಆಟೋ, ಟ್ಯಾಕ್ಸಿ ಚಾಲಕರಿಂದ ಅರ್ಜಿ ಆಹ್ವಾನ
ಬೆಂಗಳೂರು, ಮೇ 8: ಕೊರೋನ ಲಾಕ್ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ಟ್ಯಾಕ್ಸಿ, ಕ್ಯಾಬ್ ಮತ್ತು ಆಟೋ ಚಾಲಕರಿಗೆ 5 ಸಾವಿರ ರೂ, ಸಹಾಯಧನವನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದು, ಘೋಷಣೆಯಾದ ಹಣವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಸಲುವಾಗಿ ಸುತ್ತೋಲೆ ಹೊರಡಿಸಿರುವ ಸಾರಿಗೆ ಇಲಾಖೆ ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಬೇಕಾದ ಅಂತರ್ಜಾಲದ ವಿಳಾಸ: https://sevasindhu.karnataka.gov.in ಸಲ್ಲಿಸಬಹುದಾಗಿದೆ. ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಎಲ್ಲರೂ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅದನ್ನು ಹೊರತು ಬೇರೆ ಯಾವುದೇ ರೂಪದಲ್ಲಿ ಸಲ್ಲಿಸಲಾಗುವ ಅರ್ಜಿ ಸ್ವೀಕೃತವಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Next Story