ಕರ್ನಾಟಕದಲ್ಲಿ 2,000 ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ
ರವಿವಾರ 97 ಜನರಲ್ಲಿ ಕೊರೋನ ಪಾಸಿಟಿವ್ ಕೇಸ್ ಪತ್ತೆ
ಬೆಂಗಳೂರು, ಮೇ 24: ಕರ್ನಾಟಕದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ರವಿವಾರ 2000 ಗಡಿ ದಾಟಿದೆ.
ರವಿವಾರ ಹೊಸದಾಗಿ 97 ಜನರಲ್ಲಿ ಕೊರೋನ ಪಾಸಿಟಿವ್ ಕೇಸ್ ಪತ್ತೆಯಾಗುವುದರೊಂದಿಗೆ ರಾಜ್ಯದಲ್ಲಿ ಒಟ್ಟು 2,056 ಮಂದಿ ಕೊರೋನ ಸೋಂಕಿಗೆ ತುತ್ತಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ 26, ಉಡುಪಿಯಲ್ಲಿ 18,ಮಂಡ್ಯದಲ್ಲಿ 15, ಹಾಸನದಲ್ಲಿ 7, ಯಾದಗಿರಿಯಲ್ಲಿ 6, ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತಲಾ 1 ಕೊರೋನ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಬೆಳಗ್ಗಿನ ವರದಿಯಲ್ಲಿ ತಿಳಿಸಿದೆ.
ರಾಜ್ಯಕ್ಕೆ ಮತ್ತೆ ಕಂಟಕವಾದ ಮಹಾರಾಷ್ಟ್ರ: ಇಂದು ಹೊಸತಾಗಿ ಪತ್ತೆಯಾದ 97 ಜನರಲ್ಲಿ ಮಹಾರಾಷ್ಟ್ರದಿಂದ ಬಂದಿರುವ 73 ಜನರಿಗೆ ಕೊರೋನ ವೈರಸ್ ತಗಲಿದೆ. ಚಿಕ್ಕಬಳ್ಳಾಪುರದಲ್ಲಿ ಸೋಂಕಿಗೆ ಒಳಗಾಗಿರುವ 26 ಜನ ಮುಂಬೈನಿಂದ ಬಂದವರಾಗಿದ್ದಾರೆ.
Next Story