ಎಸೆಸೆಲ್ಸಿ ಪರೀಕ್ಷಾರ್ಥಿಗಳಿಗೆ ಕೆಎಸ್ಆರ್ಟಿಸಿಯಿಂದ ಉಚಿತ ಪ್ರಯಾಣ ವ್ಯವಸ್ಥೆ
ಬೆಂಗಳೂರು, ಜೂ. 12: ಇದೆ ತಿಂಗಳ 25ರಿಂದ ಜುಲೈ 4ರ ವರೆಗೆ ನಡೆಯಲಿರುವ ಎಸೆಸೆಲ್ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂದಿರುಗುವ ವೇಳೆ 'ಪ್ರವೇಶ ಪತ್ರ'ವನ್ನು ತೋರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಅದೇ ರೀತಿಯಲ್ಲಿ ಜೂ.18ರಂದು ನಡೆಯಲಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪರೀಕ್ಷೆ ಇದ್ದು, ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂದಿರುಗಲು ಪ್ರವೇಶ ಪತ್ರವನ್ನು ತೋರಿಸಿ ಸಂಸ್ಥೆ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಸುತ್ತೋಲೆ ಹೊರಡಿಸಿದ್ದಾರೆ.
Next Story