ಸೋಮವಾರಪೇಟೆ : ನಿವೃತ್ತ ಎಎಸ್ಐ ಆತ್ಮಹತ್ಯೆ
ಮಡಿಕೇರಿ : ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಎಸ್ಐ ಎಂ.ಎಸ್.ಈರಪ್ಪ ಅವರು ಗುಂಡು ಹೊಡೆದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆ ಸಮೀಪದ ಮಾದೇಗೋಡು ಗ್ರಾಮದಲ್ಲಿ ನಡೆದಿದೆ.
ಅವರು ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿ, ಮೇ 30ರಂದು ನಿವೃತ್ತಿ ಹೊಂದಿದ್ದರು.
ಇಂದು ಬೆಳಗ್ಗೆ ತಮ್ಮ ಮನೆಯಲ್ಲೇ ಒಂಟಿ ನಳಿಕೆಯ ಬಂದೂಕು ಬಳಸಿ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದ್ದು, ಈ ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ.
ಮೃತರು ಪತ್ನಿ, ಓರ್ವ ಪುತ್ರಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಶನಿವಾರಸಂತೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story