ಮೈಸೂರು: ಕೊರೋನ ವೈರಸ್ ಗೆ ಮತ್ತೊಂದು ಬಲಿ
ಮೈಸೂರು: ಕೊರೋನ ವೈರಸ್ ಗೆ ಮೈಸೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಕೇತುಪುರ ಗ್ರಾಮದ ವೃದ್ಧೆ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಕೇತುಪುರ ಗ್ರಾಮದ 63 ವರ್ಷದ ವೃದ್ಧೆ ಬುಧವಾರ ತಡ ರಾತ್ರಿ ನಗರದ ನೂತನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತಿದ್ದ ಅವರು ಟಿ.ನರಸೀಪುರ ಸರ್ಕಾರಿ ಆಸ್ಪತ್ರಗೆ ದಾಖಲಾಗಿದ್ದರು. ಅವರಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ನಂತರ ಅವರಿಗೆ ಮೈಸೂರಿನ ಕೋವಿಡ್-19 ಜಿಲ್ಲಾಸ್ಪತ್ರೆಯ ಐಸೂಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತಿತ್ತು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
Next Story