ಕೊರೋನ ಸೋಂಕಿಗೆ ಮೈಸೂರಿನಲ್ಲಿ ಇಬ್ಬರು ಬಲಿ: 6ಕ್ಕೆ ಏರಿದ ಸಾವಿನ ಸಂಖ್ಯೆ
ಸಾಂದರ್ಭಿಕ ಚಿತ್ರ
ಮೈಸೂರು,ಜು.5: ಕೊರೋನ ಮಹಾಮಾರಿಗೆ ರವಿವಾರ ಮೈಸೂರಿನಲ್ಲಿ ಇಬ್ಬರು ಸಾವೀಗೀಡಾದ ಘಟನೆ ನಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 6ಕ್ಕೆ ಏರಿದಂತಾಗಿದೆ.
ಕೊರೋನ ಸೊಂಕಿತ ವೃದ್ದೆ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಕೊರೋನ ಧೃಡವಾದ ಹಿನ್ನಲೆಯಲ್ಲಿ ನೂತನ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದ ಸಾವೀಗೀಡಾಗಿದ್ದಾರೆ.
ಮತ್ತೊಬ್ಬ ವೃದ್ಧ ಉಸಿರಾಟದ ತೊಂದರೆಯಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಹ ಸಾವನ್ನಪ್ಪಿದ್ದಾರೆ. ಕೊರೋನ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಮೈಸೂರಿಗರಲ್ಲಿ ಆತಂಕ ಹೆಚ್ಚಿಸಿದೆ.
Next Story