ರಾಜ್ಯದ ಕೋವಿಡ್ ನಿಯಂತ್ರಣ ಕ್ರಮದ ಬಗ್ಗೆ ಕೇಂದ್ರದ ತಂಡದ ಮೆಚ್ಚುಗೆ | Vartha Bharati- ವಾರ್ತಾ ಭಾರತಿ

ರಾಜ್ಯದ ಕೋವಿಡ್ ನಿಯಂತ್ರಣ ಕ್ರಮದ ಬಗ್ಗೆ ಕೇಂದ್ರದ ತಂಡದ ಮೆಚ್ಚುಗೆ

ಬೆಂಗಳೂರು, ಜು. 7: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ಭೇಟಿಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ತಂಡವು ರಾಜ್ಯದ ಕೋವಿಡ್ ನಿರ್ವಹಣೆಯ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತು.

ಕೇಂದ್ರ ಆರೋಗ್ಯ ಸಚಿವಾಲಯದ ಅಪರ ಕಾರ್ಯದರ್ಶಿ ಆರ್ತಿ ಅಹುಜಾ ಹಾಗೂ ತುರ್ತು ವೈದ್ಯಕೀಯ ಸ್ಪಂದನಾ ಕೇಂದ್ರದ ನಿರ್ದೇಶಕ ಡಾ. ರವೀಂದ್ರನ್ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸಂಪರ್ಕಿತರ ಪತ್ತೆ ಹಚ್ಚುವುದು ಹಾಗೂ ಕೊ-ಮಾರ್ಬಿಡ್ ವ್ಯಕ್ತಿಗಳನ್ನು ಗುರುತಿಸಿ, ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಈ ತಂಡವು ಪ್ರಶಂಸೆ ವ್ಯಕ್ತಪಡಿಸಿತು.

ಮುಂದಿನ ದಿನಗಳಲ್ಲಿ, ಕೋವಿಡ್ ನಿಂದ ಉಂಟಾಗುವ ಮರಣವನ್ನು ತಡೆಗಟ್ಟಲು ಹಾಗೂ ರೋಗ ಲಕ್ಷಣ ಇರುವ ಸೋಂಕಿತರಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಒದಗಿಸಲು ಆದ್ಯತೆ ನೀಡಬೇಕಾಗಿದೆ. ಜೊತೆಗೆ ಕಂಟೈನ್ಮೆಂಟ್ ವಲಯಗಳಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯಾಗಬೇಕಾಗಿದೆ ಎಂದು ಕೇಂದ್ರ ತಂಡದ ಅಧಿಕಾರಿಗಳು ಸಲಹೆ ನೀಡಿದರು.

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಹೈ ಫ್ಲೋ ಆಕ್ಷಿಜನ್ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ಆಗಸ್ಟ್ 15 ರೊಳಗಾಗಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿವೆ ಎಂದು ವಿವರಿಸಿದರು..

ಸಭೆಯಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಂಟೈನ್ಮೆಂಟ್ ಝೋನ್‍ಗಳಲ್ಲಿ ಹೆಚ್ಚು ಪರೀಕ್ಷೆ ನಡೆಸಲು ಕೇಂದ್ರ ತಂಡ ಸಲಹೆ ನೀಡಿದೆ. ಸರಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ತಂಡ ಹೇಳಿದೆ. ಕಂಟೈನ್ಮೆಂಟ್ ಝೋನ್‍ಗಳಿಗೆ ಹೋಗಿ ಅವರು ಪರಿಶೀಲನೆ ಮಾಡಲಿದ್ದಾರೆ. ಕೋವಿಡ್ ಕೇರ್ ಸೆಂಟರ್‍ಗಳಿಗೆ ಭೇಟಿ ನೀಡಲಿದ್ದಾರೆ. ಆ ಬಳಿಕ ಮತ್ತೊಮ್ಮೆ ಮುಖ್ಯಮಂತ್ರಿ ಜೊತೆ ಸಭೆ ನಡೆಸಲಿದ್ದಾರೆ. ಕೋವಿಡ್ ಸೋಂಕು ಸಮುದಾಯಕ್ಕೆ ಹರಡಿಲ್ಲ. ನಾವು ಇನ್ನು ಒಂದು ಹಾಗೂ ಎರಡನೆ ಸ್ಟೇಜ್‍ನಲ್ಲಿ ಇದ್ದೇವೆ. ಮೂರನೆ ಸ್ಟೇಜ್‍ಗೆ ಇನ್ನೂ ಹೋಗಿಲ್ಲ. ಈ ಬಗ್ಗೆ ಅಧಿಕಾರಿಗಳ ತಂಡದ ಗಮನಕ್ಕೆ ತಂದಿದ್ದೇವೆ.

-ಬಿ.ಶ್ರೀರಾಮುಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top