ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೋಂ ಕ್ವಾರಂಟೈನ್
ಮೈಸೂರು, ಜು.11: ಮಾಜಿ ಸಚಿವ, ಶಾಸಕ ಎಸ್.ಎ.ರಾಮದಾಸ್ ಅವರ ಇಬ್ಬರು ಆಪ್ತ ಸಹಾಯಕರಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಾಸಕರು ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಮದಾಸ್, ‘‘ನನ್ನ ಇಬ್ಬರು ಆಪ್ತ ಸಹಾಯಕರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಅವರು ಈಗಾಗಲೇ ಸೂಕ್ತವಾದ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾನೂ ಕೂಡ ಮುಂಜಾಗ್ರತಾ ಕ್ರಮವಾಗಿ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಿರುತ್ತೇನೆ’’ ಎಂದು ತಿಳಿಸಿದ್ದಾರೆ.
ಮಾಜಿ ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ರಾಮದಾಸ್ ಅವರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಹಾಲಿ ಶಾಸಕರಾಗಿದ್ದಾರೆ.
ನನ್ನ ಇಬ್ಬರು ಆಪ್ತ ಸಹಾಯಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಅವರು ಈಗಾಗಲೇ ಸೂಕ್ತವಾದ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.
— S A Ramadass (@ramadassmysuru) July 11, 2020
ನಾನೂ ಕೂಡ ಮುಂಜಾಗ್ರತಾ ಕ್ರಮವಾಗಿ 7 ದಿನಗಳ ಕಾಲ ಹೋಮ್ ಕ್ವಾರಂಟೈನ್ ಆಗಿರುತ್ತೇನೆ.
Next Story