ಪರೀಕ್ಷೆಯಲ್ಲಿ ಅನುತ್ತೀರ್ಣ: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ
ಅರಕಲಗೂಡು, ಜು.14: ಮಂಗಳವಾರ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮಲ್ಲಿಪಟ್ಟಣ ಹೋಬಳಿ ಕೋಠಿ ದಾಸಯ್ಯನಕೊಪ್ಪಲುವಿನ ಭೂಮಿಕ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಭೂಮಿಕ ಹಾಸನದ ವಿಭಜಿತ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದ್ದಳು. ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ ಭೂಮಿಕಾ ಅನುತ್ತೀರ್ಣಳಾಗಿದ್ದಾಳೆ. ಇದರಿಂದ ಮನನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
Next Story