ಎಸೆಸೆಲ್ಸಿ ಮೌಲ್ಯಮಾಪನ ನಡೆಸುತ್ತಿದ್ದ ವೇಳೆ ಕುಸಿದು ಬಿದ್ದು ಶಿಕ್ಷಕ ಸಾವು
ಶಿವಮೊಗ್ಗ, ಜು.15: ಎಸೆಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ನಡೆಸುತ್ತಿದ್ದಾಗ ಶಿಕ್ಷಕರೊಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಕುಮಾರ್ ಎನ್.ಎಮ್ (48) ಮೃತ ಶಿಕ್ಷಕ. ಇವರು ಭದ್ರಾವತಿಯ ನ್ಯೂಟೌನ್ ನಲ್ಲಿರುವ ಖಾಸಗಿ ಅನುದಾನ ರಹಿತ ಶಾಲೆಯ ಈಶ್ವರಮ್ಮ ಪ್ರೌಢಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಬುಧವಾರ ಶಿವಮೊಗ್ಗ ನಗರದ ಬಾಲರಾಜ ಅರಸ್ ರಸ್ತೆಯಲ್ಲಿರುವ ನ್ಯಾಷನಲ್ ಬಾಯ್ಸ್ ಹೈಸ್ಕೂಲ್ ಮೌಲ್ಯಮಾಪನ ಕೇಂದ್ರದಲ್ಲಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆಯ ಮೌಲ್ಯಮಾಪನ ನಡೆಸುತ್ತಿದ್ದಾಗ ಮಧ್ಯಾಹ್ನ ಕುಮಾರ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ಶಿಕ್ಷಕ ಕುಮಾರ್ ಮೃತಪಟ್ಟಿದ್ದಾರೆ.
Next Story