ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ರಿಗೆ ಕೊರೋನ ಸೋಂಕು ದೃಢ
ಮೈಸೂರಿನಲ್ಲಿ ಇಂದು 130 ಮಂದಿಗೆ ಪಾಸಿಟಿವ್
ಮೈಸೂರು,ಜು.16: ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚೆಗಷ್ಟೆ ಬೆಂಗಳೂರಿಗೆ ಹೋಗಿ ಬಂದಿದ್ದ ಅವರಿಗೆ ಸೋಂಕು ತಗಲಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಅವರ ಸ್ಯಾಂಪಲ್ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಕುಟುಂಬಸ್ಥರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತಿದ್ದು, ಇಂದು ಒಂದೇ ದಿನ 130 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.
ಕೊರೋನ ಸೋಂಕಿತರ ಸಂಪರ್ಕದಲ್ಲಿದ್ದ 57 ಮಂದಿ, ಉಸಿರಾಟದ ತೊಂದರೆಯ 19, ಐಎಲ್ಐ 41, ಪ್ರಯಾಣ ಮಾಡಿದ್ದ 8 ಮತ್ತು 5 ಗರ್ಭಿಣಿಯರಿಗೆ ಕೊರೋನ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ಅಭಿರಾಜ್ ಜಿ.ಶಂಕರ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story