ಕಲಬುರಗಿ ಜಿಲ್ಲೆಯಲ್ಲಿ ಜುಲೈ 27ರವರೆಗೆ ಲಾಕ್ಡೌನ್ ವಿಸ್ತರಣೆ
ಜಿಲ್ಲಾಧಿಕಾರಿ ಬಿ.ಶರತ್
ಕಲಬುರಗಿ, ಜು.19: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕಲಬುರಗಿಯಲ್ಲಿ ಈಗಾಗಲೇ ಘೋಷಿಸಲಾಗಿರುವ ಲಾಕ್ಡೌನ್ ಅನ್ನು ಜು.27ರವರೆಗೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.
ಕೊರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಜು.14ರಿಂದ ಜು.20ರವರೆಗೆ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಇದನ್ನು ಜು.27ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜನತೆಯ ಆರೋಗ್ಯದ ಹಿತದೃಷ್ಟಿಯ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಈ ಮುಂಚೆ ಅನುಮತಿಸಿದ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆದಿರತಕ್ಕದ್ದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Next Story