ಆಂಬ್ಯುಲೆನ್ಸ್ ಚಾಲಕನ ಮೇಲೆ ಹಲ್ಲೆ ಅಮಾನವೀಯ ವರ್ತನೆ: ಡಾ.ಕೆ.ಸುಧಾಕರ್
ಬೆಂಗಳೂರು, ಜು.30: ಕೊರೋನ ವಾರಿಯರ್ ಆಂಬ್ಯುಲೆನ್ಸ್ ಚಾಲಕನ ಮೇಲೆ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯ ಆವರಣದಲ್ಲಿ ಹಲ್ಲೆ ಮಾಡಿರೋದು ಅಮಾನವೀಯ ವರ್ತನೆ. ಪ್ರಾಣವನ್ನು ಲೆಕ್ಕಿಸದೆ 108 ಚಾಲಕ ಆಸ್ಪತ್ರೆಗೆ ದಾಖಲಿಸಲು ರೋಗಿಯನ್ನು ಕರೆ ತಂದರೆ ಈ ರೀತಿ ಹಲ್ಲೆ ಮಾಡಿರೋದು ಸರಿಯಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ರೋಗಿಯನ್ನು ಕಾಯಿಸಿದ್ದಕ್ಕೆ 75 ವರ್ಷದ ವ್ಯಕ್ತಿ ಆಂಬ್ಯುಲೆನ್ಸ್ ನಲ್ಲೆ ಮೃತಪಟ್ಟಿದ್ದಾರೆ ಎಂಬ ಸುದ್ದಿ ನಿಜಕ್ಕೂ ನೋವಿನ ಸಂಗತಿ. ಸರಕಾರ ಸಾವಿನ ಸಂಖ್ಯೆಯನ್ನು ಇಳಿಸಲು ಶತಪ್ರಯತ್ನ ಮಾಡುತ್ತಿದೆ. ಆದರೆ, ಆಸ್ಪತ್ರೆಯ ಸಿಬ್ಬಂದಿ ಅವರನ್ನು ಬೇಗ ದಾಖಲು ಮಾಡಿಕೊಂಡಿದ್ದರೆ ಪ್ರಾಣ ಉಳಿಯುತ್ತಿತ್ತು ಎಂದು ಅವರು ತಿಳಿಸಿದ್ದಾರೆ.
Next Story