ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಕೊರೋನ ಪಾಸಿಟಿವ್
ಬೆಂಗಳೂರು, ಆ. 7: ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆ.3ರಂದು ಕೊರೋನ ಸೋಂಕು ದೃಢಪಟ್ಟಿದ್ದು, ನಗರದ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದರ ಬೆನ್ನಲ್ಲೆ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯವರಿಗೂ ಕೋವಿಡ್-19 ಪಾಸಿಟಿವ್ ಬಂದಿದೆ ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
"ನನ್ನ ಕೊರೋನ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ನಲ್ಲಿದ್ದು, ಮುಂಜಾಗ್ರತೆ ವಹಿಸಬೇಕು" ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— Dr Yathindra Siddaramaiah (@Dr_Yathindra_S) August 7, 2020