ವಿಕಲಚೇತನರ ಸಬಲೀಕರಣ : ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಆ.7: ಪ್ರಸಕ್ತ 2020-21ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಕೇಂದ್ರ ಸರಕಾರ ವಿಕಲಚೇತನರ ಸಬಲೀಕರಣ ಇಲಾಖೆಯು ಉದ್ದೇಶಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಂಗ್ಲ ಭಾಷೆಯಲ್ಲಿ ವಿವರಗಳನ್ನು ಭರ್ತಿ ಮಾಡಿ, ಪಾರ್ಸ್ಪೋರ್ಟ್ ಅಳತೆಯ ಭಾವಚಿತ್ರ (ವೈಯಕ್ತಿಕ ವಿಭಾಗ), ಅರ್ಜಿದಾರರ/ವ್ಯಕ್ತಿಗಳ/ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ, ಪೂರಕ ದಾಖಲೆ, ಡ್ರಾಫ್ಟ್ ಸೈಟೇಷನ್ (1 ಪುಟಕ್ಕೆ ಮೀರದಂತೆ) ಈ ಎಲ್ಲ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಟ್ವಾರ ಜಿಪಂ ಕಟ್ಟಡ, ಮಂಗಳೂರು ದೂ.ಸಂ.: 0824- 2458173, 2455999ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story