ರಾಜ್ಯದಲ್ಲಿ ಮತ್ತೆ 5,985 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1.78 ಲಕ್ಷಕ್ಕೆ ಏರಿಕೆ
ಇದುವರೆಗೆ 93 ಸಾವಿರಕ್ಕೂ ಅಧಿಕ ಮಂದಿ ಗುಣಮುಖ
ಬೆಂಗಳೂರು, ಆ.9: ರಾಜ್ಯದಲ್ಲಿ ಶನಿವಾರ ಸಂಜೆಯಿಂದ ರವಿವಾರ ಸಂಜೆವರೆಗೆ ಮತ್ತೆ 5,985 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 1,78,087 ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 107 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 3,198ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದೇ ದಿನ 22 ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಮೈಸೂರು 12, ಬಳ್ಳಾರಿ 9, ದಾವಣಗೆರೆ 9, ಕೋಲಾರ 8, ಹಾಸನ 7, ಧಾರವಾಡ 6, ದಕ್ಷಿಣ ಕನ್ನಡ 6, ಕಲಬುರಗಿ 4, ತುಮಕೂರು 4, ಬೀದರ್ 4, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಚಾಮರಾಜನಗರ, ರಾಯಚೂರು, ಕೊಪ್ಪಳದಲ್ಲಿ ತಲಾ 2, ಯಾದಗಿರಿ, ಮಂಡ್ಯ, ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1948, ಮೈಸೂರು 455, ಬಳ್ಳಾರಿ 380, ಉಡುಪಿ 282, ಬೆಳಗಾವಿ 235, ರಾಯಚೂರು 202, ಧಾರವಾಡ 196, ಕಲಬುರಗಿ 194, ಹಾಸನ 168, ದಾವಣಗೆರೆ 158, ಶಿವಮೊಗ್ಗ 149, ಬಾಗಲಕೋಟೆ 149, ದಕ್ಷಿಣ ಕನ್ನಡ 132, ವಿಜಯಪುರ 129, ಗದಗ 114, ಚಿಕ್ಕಮಗಳೂರು 113, ಕೊಪ್ಪಳ 106, ಚಿತ್ರದುರ್ಗ 98, ಬೆಂಗಳೂರು ಗ್ರಾಮಾಂತರ 95, ಯಾದಗಿರಿ 91, ಕೋಲಾರ 87, ಹಾವೇರಿ 80, ತುಮಕೂರು 78, ಬೀದರ್ 70, ಮಂಡ್ಯ 63, ಉತ್ತರ ಕನ್ನಡ 59, ಚಿಕ್ಕಮಗಳೂರು 47, ಚಾಮರಾಜನಗರ 47, ರಾಮನಗರ 38, ಕೊಡಗು ಜಿಲ್ಲೆಯಲ್ಲಿ 22 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 1,78,087 ಕೊರೋನ ಸೋಂಕಿತರ ಪೈಕಿ 93,908 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 4,670 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 3,198 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 80,973 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.