ಚಾಮರಾಜನಗರ: ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನ; ರೈತರ ಬಂಧನ
ಚಾಮರಾಜನಗರ, ಆ.10: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ರೈತರನ್ನು ಪೊಲೀಸರು ಬಂಧಿಸಿದರು.
ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂದೆ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರೈತರ ಸಮಸ್ಯೆಗೆ ಸರ್ಕಾರಗಳು ಸ್ಪಂಧಿಸುತ್ತಿಲ್ಲ ಎಂದು ಆರೋಪಿಸಿ, ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಜಿಲ್ಲಾಡಳಿತ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ರೈತ ಸಂಘದ ಕಾರ್ಯಕರ್ತರನ್ನು ಬಂಧಿಸಿದರು.
ಚಾಮರಾಜನಗರದ ಜಿಲ್ಲಾಡಳಿತ ಭವನ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಮಾರಕವಾಗಿರುವ ಕಾಯ್ದೆ ತರಲು ಮುಂದಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.