ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ: ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ
ಹಾವೇರಿ, ಆ.11: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಹಾಗೂ ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಗರದ ದ್ಯಾಮವ್ವನಗುಡಿ ಬೀದಿಯ ವೈಷ್ಣವಿ ರಿತ್ತಿ ಎಂಬ ವಿದ್ಯಾರ್ಥಿನಿ ಗಣಿತದಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಬ್ಯಾಡಗಿ ತಾಲೂಕಿನ ಕಾಶಂಬಿ ಗ್ರಾಮದ ಭಾರತಿ ಕೋಟೆ ಎಂಬ ವಿದ್ಯಾರ್ಥಿನಿ ಕಡಿಮೆ ಅಂಕ (ಶೇ.61.6) ಬಂದಿದೆ ಎಂದು ವಿಷಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story