ಕೃಷಿ ಇಲಾಖೆಯ ಮೂವರು ನೌಕರರು ಕೊರೋನ ಸೋಂಕಿನಿಂದ ಸಾವು
ಸಾಂದರ್ಭಿಕ ಚಿತ್ರ
ಬಳ್ಳಾರಿ, ಆ.13: ಜಿಲ್ಲಾ ವ್ಯಾಪ್ತಿಯ ಕೃಷಿ ಇಲಾಖೆಯ ಮೂವರು ನೌಕರರು ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾತನಾಡಿ, ಜಿಲ್ಲಾ ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಸಹಾಯಕ ನಿರ್ದೇಶಕ ಹಾಗೂ ಇಬ್ಬರು ಎಫ್ಡಿಎ ಸಿಬ್ಬಂದಿ ಕೊರೋನ ಸೋಂಕಿನಿಂದ ಬಳಲುತ್ತಿದ್ದರು. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
Next Story