ಮಾಜಿ ಶಾಸಕ ಪ್ರಸನ್ನ ಕುಮಾರ್ ರಿಗೆ ಕೊರೋನ ಪಾಸಿಟಿವ್
ಶಿವಮೊಗ್ಗ, ಆ.31: ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರಿಗೆ ಕೊರೋನ ಪಾಸಿಟಿವ್ ಬಂದಿದೆ.ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ನನ್ನ ಕೊರೋನ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕಾ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಹೋಂ ಕ್ವಾರಂಟೈನ್ ನಲ್ಲಿದ್ದು ಮುಂಜಾಗೃತೆ ವಹಿಸುವಂತೆ ಅವರು ಕೋರಿದ್ದಾರೆ.
Next Story