55 ಡಿವೈಎಸ್ಪಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ
ಬೆಂಗಳೂರು, ಸೆ.1: ರಾಜ್ಯ ಪೊಲೀಸ್ ಇಲಾಖೆಯ 55 ಮಂದಿ ಡಿವೈಎಸ್ಪಿ(ಸಿವಿಲ್) ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ, ತಕ್ಷಣವೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕೆಂದು ಡಿಜಿ ಐಜಿಪಿಯವರ ನಿರ್ದೇಶನದ ಮೇರೆಗೆ ಡೈರೆಕ್ಟರ್ ಜನರಲ್ ಮತ್ತು ಇನ್ ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಡಾ.ಎಂ.ಎ.ಸಲೀಂ ಅವರು ಆದೇಶ ಹೊರಡಿಸಿದ್ದಾರೆ.
Next Story