ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಬೆಂಗಳೂರು, ಸೆ.2: ಕೆಎಸ್ಸಾರ್ಟಿಸಿ ವತಿಯಿಂದ ತಾಂತ್ರಿಕ ವಿಶ್ವವಿದ್ಯಾಲಯ, ವೃತ್ತಿಪರ ಹಾಗೂ ಸ್ನಾತಕೋತ್ತರ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಬಸ್ಗಳಲ್ಲಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಎಲ್ಲ ಪರೀಕ್ಷೆಗಳು ನಡೆಯಲಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2019-20ನೇ ಸಾಲಿನಲ್ಲಿ ಪಡೆದಿರುವ ವಿದ್ಯಾರ್ಥಿ ಬಸ್ಪಾಸ್ ಹೊಂದಿರುವವರಿಗೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಬಸ್ಪಾಸ್ ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story