ಕೇಂದ್ರ ಸರಕಾರಕ್ಕೆ ಸಿಎಂ ಯಡಿಯೂರಪ್ಪ ಅಭಿನಂದನೆ
ಬೆಂಗಳೂರು, ಸೆ.9: ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ, ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ‘ಶ್ರೀ ಸಿದ್ದಾರೂಢ ಸ್ವಾಮೀಜಿ’ ಹೆಸರನ್ನಿಡಲಾಗುತ್ತಿದ್ದು ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಶಾ, ಸಚಿವರಾದ ಪಿಯೂಶ್ ಗೋಯಲ್, ಪ್ರಹ್ಲಾದ್ ಜೋಶಿ ಹಾಗೂ ಸುರೇಶ್ ಅಂಗಡಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Next Story