ಸೆ.21ರಿಂದ ಎಸೆಸೆಲ್ಸಿ ಪೂರಕ ಪರೀಕ್ಷೆ: ಕೆಎಸ್ಸಾರ್ಟಿಸಿಯಿಂದ ಉಚಿತ ಪ್ರಯಾಣ ವ್ಯವಸ್ಥೆ
ಬೆಂಗಳೂರು, ಸೆ.18: ಎಸೆಸೆಲ್ಸಿ ಪೂರಕ ಪರೀಕ್ಷೆಯು ಸೆ.21ರಿಂದ 28ರವರೆಗೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ ವತಿಯಿಂದ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗಲು ಮತ್ತು ಬರಲು ಅವಕಾಶ ಮಾಡಿಕೊಡಲಾಗಿದೆ. ಎಸೆಸೆಲ್ಸಿ ಪೂರಕ ಪರೀಕ್ಷೆಯ ಪ್ರವೇಶಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story