ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ನೋಡಲು ಸಾರ್ವಜನಿಕರಿಗೆ ಅವಕಾಶ
ಮೈಸೂರು,ಸೆ.25: ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವದ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ಜೋಡಿಸಿರುವ ರತ್ನ ಖಚಿತ ಸಿಂಹಾಸನ ನೋಡಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.
ಪ್ರತಿವರ್ಷ ದಸರಾ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸಿಂಹಾಸನದ ಜೋಡಣೆ ನಡೆಯುತ್ತದೆ. ಈ ಬಾರಿ ಅಧಿಕ ಮಾಸದ ಕಾರಣ ಒಂದು ತಿಂಗಳು ಮುಂಚಿತವಾಗಿಯೇ ಜೋಡಣೆ ನಡೆದಿದ್ದು, ಅರಮನೆ ಪ್ರವೇಶಕ್ಕೆ 70 ರೂ(ವಯಸ್ಕರು), ಮಕ್ಕಳಿಗೆ 35 ರೂ. ವಿಧಿಸಿದರೆ ಸಿಂಹಾಸನ ವೀಕ್ಷಣೆಗೆ 50 ರೂ.ಶುಲ್ಕ ವಿಧಿಸಲಾಗುತ್ತದೆ.
ಜಿಲ್ಲಾ ಖಜಾನೆಯಲ್ಲಿದ್ದ ಈ ಸಿಂಹಾಸನವನ್ನು ದರ್ಬಾರ್ ಹಾಲ್ ನಲ್ಲಿ ಜೋಡಿಸಿಡಲಾಗಿದೆ. ಛಾಯಾ ಚಿತ್ರ, ವಿಡಿಯೋ ತೆಗೆಯುವುದನ್ನು ನಿಷೇಧಿಸಲಾಗಿದೆ.
Next Story